ಮಂಡ್ಯ: ತನ್ನ ಇಬ್ಬರು ಮಕ್ಕಳೊಂದಿಗೆ ಹೆತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದಿದೆ.ಮಳವಳ್ಳಿಯ ಗುಳಘಟ್ಟ ಗ್ರಾಮದ ಸುನೀತಾ(32) ಹಾಗೂ ಈಕೆಯ ಮಕ್ಕಳಾದ ಪ್ರಜ್ವಲ್(13) ಹಾಗೂ ಪ್ರಿಯಾಂಕ(15) ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುರುವಾರ ತಡರಾತ್ರಿ ಮನೆಯಲ್ಲಿ ಒಂದು ಸೀರೆಯನ್ನು ತೆಗೆದುಕೊಂಡು ಅದನ್ನು ತನ್ನ ಇಬ್ಬರು ಮಕ್ಕಳ ಕುತ್ತಿಗೆಗೆ ಬಿಗಿದು ನಂತರ ಅದೇ ಸೀರೆಯಲ್ಲಿ ತಾನು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ಈ ಘಟನೆಗೆ ಕೌಟುಂಬಿಕ ಕಲಹ ಹಾಗೂ ಸಾಲಬಾಧೆ ಕಾರಣ ಇರಬಹುದೆಂದು ಹೇಳಲಾಗುತ್ತಿದೆ. ಆತ್ಮಹತ್ಯೆಯ ದೃಶ್ಯ ನೋಡಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮೊದಲು ಸುನೀತಾ ಡೆತ್‍ನೋಟ್ ಬರೆದಿದ್ದು, ಅದರಲ್ಲಿ ಇಬ್ಬರ ಹೆಸರನ್ನು ಉಲ್ಲೇಖಿಸಿದ್ದಾರೆ.ಈ ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.Sign in to your account
Username or Email Address


Password

 Remember Me


