ಬೆಳಗಾವಿ: ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್, ಕಾರು ಮತ್ತು ನಾಲ್ಕು ಬೈಕ್ ಗಳು ಡಿಕ್ಕಿಯಾದ ಪರಿಣಾಮ ಬೈಕ್ ಸವಾರನ ಕಾಲು ಕಟ್ ಆಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಅರಟಾಳ್ ಕ್ರಾಸ್ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ.ಟೆಂಪೋ ವಿಜಯಪುರದಿಂದ ಅಥಣಿ ಕಡೆಗೆ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕ್ರೂಸರ್, ಕಾರು ಮತ್ತು ನಾಲ್ಕು ಬೈಕ್ ಗಳಿಗೆ ಡಿಕ್ಕಿಯಾಗಿದೆ. ಇದರಿಂದ ಬೈಕ್ ಸವಾರನ ಕಾಲು ಕಟ್ ಆಗಿದ್ದು, ಉಳಿದ ಬೈಕ್ ಸವಾರರ ಪರಿಸ್ಥಿತಿ ಚಿಂತಾಜನಕವಾಗಿದೆ.ಚಾಲಕನ ನಿಯಂತ್ರಣ ತಪ್ಪಿ ಈ ಸರಣಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರರು ಬಿದ್ದು ನರಳಾಡುತ್ತಿದ್ದರು. ಆದರೆ ಅಪಘಾತ ನಡೆದು ಅರ್ಧ ಗಂಟೆಯಾದರೂ ಸಹ ಸ್ಥಳಕ್ಕೆ ಆಂಬುಲೆನ್ಸ್ ಬರಲಿಲ್ಲ. ನಂತರ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಟೆಂಪೋ ಚಾಲಕ ಭಯಗೊಂಡು ಪರಾರಿಯಾಗಿದ್ದಾನೆ.Sign in to your account
Username or Email Address


Password

 Remember Me


