ಬೆಂಗಳೂರು: ಅಸ್ತಮಾದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.ಸೋಮವಾರ ಸ್ಯಾಂಡಲ್‍ವುಡ್ ಅಭಿನಯ ಶಾರದೆ ಜಯಂತಿ ಅವರು ಅಸ್ವಸ್ಥರಾಗಿದ್ದು, ಸುಮಾರು ಬೆಳಗ್ಗೆ 11 ಗಂಟೆಗೆ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದು, ಜಯಂತಿ ಅವರ ಆರೋಗ್ಯ ವಿಚಾರಿಸಿದ್ದಾರೆ.ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು, ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜಯಂತಿ ಅವರ ಅನಾರೋಗ್ಯ ಹಿನ್ನೆಲೆಯಲ್ಲಿ ಭಾರತೀ ವಿಷ್ಣುವರ್ಧನ್, ಶ್ರೀನಾಥ್, ಶಿವರಾಜ್ ಕುಮಾರ್, ದೊಡ್ಡಣ್ಣ ಮತ್ತು ನಾಗೇಂದ್ರ ಪ್ರಸಾದ್ ಸೇರಿದಂತೆ ಹಿರಿಯ ಕಲಾವಿದರು ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.ಜಯಂತಿ ಅವರು ಆಸ್ಪತ್ರೆಯಲ್ಲಿದ್ದಾಗೆ ಅವರು ಮೃತಪಟ್ಟಿದ್ದಾರೆ ಎಂದು ಸುಳ್ಳು ವದಂತಿ ಹಬ್ಬಿತ್ತು. ಈ ಬಗ್ಗೆ ಅವರ ಪುತ್ರ ಕೃಷ್ಣಕುಮಾರ್, ಮಾಧ್ಯಮಗಳ ಜೊತೆ ಮಾತನಾಡಿ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯಲ್ಲಿ ಗಾಬರಿಯಾಗೋದು ಬೇಡ. ಅಮ್ಮನ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಸದ್ಯ ವೈದ್ಯಕೀಯ ತಪಾಸಣೆಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ.






 Advertisement 




Sign in to your account
Username or Email Address


Password

 Remember Me


