ಹಾವೇರಿ: ರಸ್ತೆ ತಿರುವಿನಲ್ಲಿದ್ದ ಕಬ್ಬಿಣದ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹಿರೇಕೋಣತಿ ಗ್ರಾಮದ ಬಳಿ ನಡೆದಿದೆ.ಗುರುಲಿಂಗಯ್ಯ ಸಿದ್ರಾಮಿಸ್ವಾಮಿಮಠ (25) ಮತ್ತು ಮಹಾದೇವ ಗುದಗಿ (28) ಮೃತ ದುರ್ದೈವಿಗಳು. ಮೃತರು ಕೆಎ 25 ಇವೈ 1549 ಸಂಖ್ಯೆಯ ಬೈಕಿನಲ್ಲಿ ಹುಬ್ಬಳ್ಳಿಯಿಂದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಹಿರೇಕೋಣತಿ ಗ್ರಾಮದ ಬಳಿ ರಸ್ತೆ ತಿರುವಿನಲ್ಲಿ ವೇಗವಾಗಿ ಬಂದು ಕಬ್ಬಿಣದ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದಿದೆ.ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.ಅಪಘಾತ ನಡೆದ ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


