ದಾವಣಗೆರೆ: 7 ವರ್ಷದ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗುತ್ತಿದ್ದ ಕಾಮುಕ ಶಿಕ್ಷಕನ್ನು ಬಂಧಿಸಿರುವ ಘಟನೆ ದಾವಣಗೆರೆ (Davanagere) ನಗರದ ಸರ್ಕಾರಿ ಶಾಲೆಯೊಂದರಲ್ಲಿ (Government School) ನಡೆದಿದೆ.ಅಪ್ರಾಪ್ತೆ ಮೇಲೆ ಕಾಮುಕ ಶಿಕ್ಷಕ ನಿರಂತರ ಅತ್ಯಾಚಾರ ಎಸಗುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ (Illness) ತುತ್ತಾದಾಗ ಪ್ರಕರಣ ಬೆಳಕಿಗೆ ಬಂದಿದೆ.ದಾವಣಗೆರೆ ನಗರದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಹಲವು ದಿನಗಳಿಂದ ಬಾಲಕಿ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಯಾರಿಗೂ ಹೇಳದಂತೆ ಆಕೆಗೆ ಬೆದರಿಕೆ ಹಾಕಿದ್ದ. ಆದ್ರೆ ಕಳೆದ ಎರಡು ದಿನಗಳ ಹಿಂದೆ ಬಾಲಕಿ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ತಪಾಸಣೆ ವೇಳೆ ಆಕೆ ಮೇಲೆ ಅತ್ಯಾಚಾರವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬಸ್‌ ಹಳ್ಳಕ್ಕೆ ಉರುಳಿಬಿದ್ದು ಮಹಿಳೆ ಸಾವು – ಐವರು ಗಂಭೀರಕೂಡಲೇ ಪೋಷಕರು ಕಾಮುಕ ಶಿಕ್ಷಕನ ವಿರುದ್ಧ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೋಷಕರ ದೂರಿನನ್ವಯ ಪೋಕ್ಸೋ ಪ್ರಕರಣದ ಅಡಿ ಕೇಸ್‌ ದಾಖಲಿಸಿದ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಅತ್ಯಾಚಾರಕ್ಕೆ ಒಳಗಾದ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ದೆಹಲಿಯಲ್ಲಿ ವಿಷವಾಗುತ್ತಿದೆಯಾ ಉಸಿರಾಡುವ ಗಾಳಿ? – ಪರಿಶೀಲನೆಗೆ 1,119 ಅಧಿಕಾರಿಗಳ 517 ತಂಡ ರಚನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


