ಬೆಂಗಳೂರು: ನಟಿ ಜಯಂತಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಅಮ್ಮನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಅಂತಾ ಪುತ್ರ ಕೃಷ್ಣಕುಮಾರ್ ಮನವಿ ಮಾಡಿಕೊಂಡಿದ್ದಾರೆ.ಉಸಿರಾಟದ ತೊಂದರೆಯಿಂದಾಗಿ ಅಸ್ವಸ್ಥರಾದ ಬಳಿಕ ಅವರನ್ನು ಪುತ್ರ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸದ್ಯ ಜಯಂತಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆದಷ್ಟೂ ಬೇಗ ಗುಣಮುಖರಾಗಲಿದ್ದಾರೆ ಅಂತಾ ಕೃಷ್ಣ ಕುಮಾರ್ ತಿಳಿಸಿದ್ದಾರೆ.ಮಂಗಳವಾರ ಸಂಜೆಯಿಂದ ಫೇಸ್‍ಬುಕ್ ಮತ್ತು ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲಾತಾಣಗಳಲ್ಲಿ ಕೆಲವರು ಜಯಂತಿ ಅವರ ಆರೋಗ್ಯದ ಕುರಿತು ಸುಳ್ಳು ಸುದ್ದಿಗಳನ್ನು ಅಪ್ಲೋಡ್ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಯಂತಿ ಪುತ್ರ ಮಾಧ್ಯಮಗಳಿಗೆ ತಾಯಿಯ ಆರೋಗ್ಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಇತ್ತ ಜಯಂತಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಸ್ಯಾಂಡಲ್ ವುಡ್ ನ ಹಿರಿಯ, ಕಿರಿಯ ಕಲಾವಿದರು ಮತ್ತು ನಿರ್ದೇಶಕರು ಅಭಿನಯ ಶಾರದೆ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ.Sign in to your account
Username or Email Address


Password

 Remember Me


