ಬೆಂಗಳೂರು: ಹುಡಗಿ ಮತ್ತು ಬೈಕ್ ವೀಲಿಂಗ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಕೆಲವು ದುಷ್ಕರ್ಮಿಗಳು ಯುವಕನಿಗೆ ಚಾಕು ಇರಿದಿರುವ ಘಟನೆ ಮಾಗಡಿ ರಸ್ತೆಯ ದಾಸರಹಳ್ಳಿ ಬಸ್ ನಿಲ್ದಾಣದ ಎಸ್ ಬಿಐ ಬ್ಯಾಂಕ್ ಬಳಿ ನಡೆದಿದೆ.21 ವರ್ಷದ ಅಕ್ಬರ್ ಅಲಿ ಚಾಕು ಇರಿತಕೊಳ್ಳಗಾದ ಯುವಕ. ಏಕಾಏಕಿ ಬಂದ ನಾಲ್ವರು ದುಷ್ಕರ್ಮಿಗಳು ಆಕ್ಬರ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಿದ್ದು ಒದ್ದಾಡುತ್ತಿದ್ದ ಅಕ್ಬರ್ ನನ್ನು ಸ್ಥಳೀಯರು ಸಮೀಪದ ಪುಣ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೀವ್ರ ರಕ್ತ ಸ್ರಾವದಿಂದಾಗಿ ಅಕ್ಬರ್ ಸ್ಥಿತಿ ಚಿಂತಾಜನಕವಾಗಿದೆ. ಸದ್ಯ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆಯುತ್ತಿದೆ ಅಂತಾ ವೈದ್ಯರು ತಿಳಿಸಿದ್ದಾರೆ.ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಬೈಕ್ ವಿಲಿಂಗ್ ಮತ್ತು ಹುಡಗಿಯರ ವಿಚಾರಕ್ಕೆ ಅಕ್ಬರ್ ಅಲಿ ಗಲಾಟೆ ಮಾಡಿಕೊಂಡಿದ್ದ ಎಂಬ ಮಾಹಿತಿಗಳು ಲಭ್ಯವಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣಾ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


