ದಾವಣಗೆರೆ: ಬೆಂಗಳೂರಿನ ಮೀಸಲು ಪೊಲೀಸ್ ಪಡೆ ಸಿಬ್ಬಂದಿಗಳಿದ್ದ ಕಾರು ಪಲ್ಟಿಯಾಗಿದ್ದು, ಪರಿಣಾಮ ಐವರಿಗೆ ಗಾಯವಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿ ಗ್ರಾಮದ ಬಳಿ ನಡೆದಿದೆ.ಸ್ವಿಫ್ಟ್ ಕಾರಿನಲ್ಲಿ ಪೊಲೀಸ್ ಸಿಬ್ಬಂದಿ ಹುಬ್ಬಳ್ಳಿ ಕಡೆಯಿಂದ ಬೆಂಗಳೂರಿನ ಕಡೆ ಮದುವೆ ಮುಗಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದಂತೆ ಅತಿ ವೇಗವಾಗಿ ಕಾರು ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ.ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿದ್ದು, ಅವರನ್ನು ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಘಟನೆ ಸಂಬಂಧ ಹರಿಹರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


