ಬೆಂಗಳೂರು: ಸ್ಯಾಂಡಲ್‍ವುಡ್ ಅಭಿನಯ ಶಾರದೆ ಜಯಂತಿ ಅವರು ಅಸ್ವಸ್ಥರಾಗಿದ್ದು, ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ.ಜಯಂತಿ ಅವರು ಹಲವು ವರ್ಷಗಳಿಂದ ಅಸ್ತಮಾದಿಂದ ಬಳಲುತ್ತಿದ್ದರು, ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತಾ ಜಯಂತಿ ಪುತ್ರ ಕೃಷ್ಣಕುಮಾರ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಮ್ಮ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಭಿಮಾನಿಗಳು ಯಾವುದೇ ರೀತಿಯಲ್ಲಿ ಗಾಬರಿಯಾಗೋದು ಬೇಡ. ಅಮ್ಮನ ಆರೋಗ್ಯಕ್ಕಾಗಿ ಎಲ್ಲರೂ ಪ್ರಾರ್ಥಿಸಿ. ಸದ್ಯ ವೈದ್ಯಕೀಯ ತಪಾಸಣೆಗಳು ನಡೆಯುತ್ತಿವೆ ಅಂತಾ ಕೃಷ್ಣಕುಮಾರ್ ಹೇಳಿದ್ದಾರೆ.Sign in to your account
Username or Email Address


Password

 Remember Me


