ಬೆಂಗಳೂರು: ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಚಿನ್ನ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.ದುಬೈನಿಂದ ಬೆಂಗಳೂರಿಗೆ ಶನಿವಾರ ರಾತ್ರಿ ಆಗಮಿಸಿದ್ದ ಇಂಡಿಗೋ ವಿಮಾನದಲ್ಲಿ ಅಕ್ರಮ ಚಿನ್ನ ಸಾಗಾಣೆ ಮಾಡುತ್ತಿದ್ದ ಮುಂಬೈ ಮೂಲದ ವ್ಯಕ್ತಿಯನ್ನ ಕೆಐಎಎಲ್ ಅಧಿಕಾರಿಗಳು ಬಂಧಿಸಿದ್ದಾರೆ.ಆರೋಪಿ ಹೆಣ್ಣು ಮಕ್ಕಳ ಚಪ್ಪಲಿ ಹಾಗೂ ಸೌಂದರ್ಯ ಆಭರಣಗಳಲ್ಲಿ ಚಿನ್ನ ಅಡಗಿಸಿಟ್ಟು ಸಾಗಾಣೆ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಪಡೆದ ಕಸ್ಟಮ್ಸ್ ಆಯುಕ್ತರಾದ ಶಿವಪ್ರಕಾಶ್ ಸೇರಿದಂತೆ ವಸಂತ್ ಮಗೋಡ್ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ದಾಳಿಯಲ್ಲಿ ವಿವಿಧ ವಸ್ತುಗಲ್ಲಿ ಅಡಗಿಸಿಟ್ಟಿದ್ದ ಸುಮಾರು ಅರ್ಧ ಕೆಜಿ ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


