ಮಂಡ್ಯ: ಜಿಲ್ಲೆ ಶ್ರೀರಂಗಪಟ್ಟಣ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇಂದು ನಸುಕಿನ ಜಾವ ಭೀಕರ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.ಲಾರಿ, ಕ್ಯಾಂಟರ್, ಮಿನಿ ಬಸ್, ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಷ್ಟೇ ಅಲ್ಲದೇ ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.Sign in to your account
Username or Email Address


Password

 Remember Me


