ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಣ್ಣೀರುಬಾವಿ ಬೀಚ್ ಬಳಿ ಬರ್ತ್ ಡೇ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.ತಣ್ಣೀರು ಬಾವಿಯ ಫಾತಿಮಾ ಚರ್ಚ್ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರ ಜೊತೆಗಿದ್ದ ಸಬಿತ್, ಸಮೀರ್ ಮತ್ತು ನಿತೇಶ್ ಎಂಬ ಮೂವರು ಹುಡುಗರ ಮೇಲೆ ಹಲ್ಲೆ ನಡೆಸಲಾಗಿದೆ.ಐವರು ಯುವಕರ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದು, ಬಳಿಕ ವಿದ್ಯಾರ್ಥಿನಿಯರು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವರೆಂಬುದನ್ನು ತಿಳಿದು ಅರ್ಧಕ್ಕೆ ಬಿಟ್ಟು ಹೋಗಿದ್ದಾರೆ. ಹಲ್ಲೆಗೊಳಗಾದ ಯುವಕರಿಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


