ಬೆಂಗಳೂರು: ಗ್ರಾಮದಲ್ಲಿನ ಜಗಳದಿಂದ ಮನನೊಂದ ಗ್ರಾಮ ಪಂಚಾಯತಿ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಲಕ್ಕೇನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಪಂಚಾಯತಿ ಸದಸ್ಯೆ ಲಕ್ಷ್ಮಿ ರೇವಣ್ಣ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಜಮೀನಿನ ವಿಚಾರದಲ್ಲಿ ಗ್ರಾಮದಲ್ಲಿ ಹಲವು ದಿನಗಳಿಂದ ಜಗಳವಾಗುತ್ತಿದ್ದು, ಶುಕ್ರವಾರ ನಡೆದ ಜಗಳದಿಂದ ಮನನೊಂದ ಲಕ್ಷ್ಮಿ ರೇವಣ್ಣ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಚಿಕಿತ್ಸೆಗಾಗಿ ನೆಲಮಂಗಲ ಪಟ್ಟಣದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


