ಬೆಂಗಳೂರು: ವೇಗವಾಗಿ ಬೈಕ್ ಓಡಿಸುಕೊಂಡು ಬಂದು ಪ್ಲೇ ಓವರ್ ಮೇಲಿನ ಡಿವೈಡರ್ ಗೆ ಡಿಕ್ಕಿಯಾಗಿ ಕೆಳಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.ಆಂಧ್ರ ಮೂಲದ ಶರತ್ ಕುಮಾರ್ ರೆಡ್ಡಿ ಮೃತ ಬೈಕ್ ಸವಾರ. ಶರತ್ ಇನ್ಫೋಸಿಸ್ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದರು ಅಂತಾ ಮಾಹಿತಿಗಳು ಲಭ್ಯವಾಗಿವೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗವಾಗ ಅಪಘಾತ ಸಂಭವಿಸಿದೆ.ಶರತ್ ಕುಮಾರ್ ವೇಗವಾಗಿ ಬೈಕ್ ಚಾಲನೆ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಬೈಕ್ ನಿಯಂತ್ರಣ ತಪ್ಪಿ ಫ್ಲೈ ಓವರ್‍ನ ತಡೆಗೋಡೆಗೆ ಡಿಕ್ಕಿ ಹೊಡೆದು 35 ಅಡಿ ಎತ್ತರದಿಂದ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪರಿಣಾಮ ಶರತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ 3 ಕಿಲೋಮೀಟರ್ ಗೂ ಹೆಚ್ಚು ದೂರ ವಾಹನಗಳು ಸಾಲುಗಟ್ಟಿದ್ದವು.2017 ದೀಪಾವಳಿ ಹಬ್ಬದ ಸಮಯದಲ್ಲಿ ಇದೆ ಪ್ಲೇ ಓವರ್ ಮೇಲೆ ಕಾರ್ ಬೈಕ್ ಗೆ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಪ್ಲೇ ಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಬೈಕ್ ಸವಾರ ಪ್ಲೇ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಳಿಮಾವು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


