ಮಂಡ್ಯ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ವಾಗತಕ್ಕೆ ಹಾಕಲಾಗುತ್ತಿದ್ದ ನೈಟ್ರೋಜನ್ ಬಲೂನ್ ಬ್ಲಾಸ್ಟ್ ಆಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದ, ಸಂತೆ ಮೈದಾನದ ಬಳಿ ನಡೆದಿದೆ.ನೈಟ್ರೋಜನ್ ಬಲೂನ್ ಹಾಕುತ್ತಿದ್ದನ್ನು ನೋಡುತ್ತಿದ್ದ 8 ಮಕ್ಕಳು ಗಾಯಗೊಂಡಿದ್ದಾರೆ. 8 ಮಕ್ಕಳಲ್ಲಿ ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದೆ ಅಂತಾ ಹೇಳಲಾಗುತ್ತಿದೆ. ಘಟನೆ ಬಳಿಕ ಕೂಡಲೇ ಗಾಯಗೊಂಡ ಮಕ್ಕಳನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳ ಬಗ್ಗೆ ಮಾಹಿತಿಗಳು ಲಭ್ಯವಾಗಿಲ್ಲ.ನಾಳೆಯಿಂದ ರಾಹುಲ್ ಗಾಂಧಿ ಎರಡು ದಿನಗಳ ಪ್ರವಾಸ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸ್ವಾಗತಕ್ಕಾಗಿ ನೈಟ್ರೋಜನ್ ಬಲೂನ್ ಹಾಕಲಾಗುತ್ತಿತ್ತು. ಬಲೂನ್ ಗೆ ಗಾಳಿ ತುಂಬುವಾಗ ಅವಘಢ ಸಂಭವಿಸಿದೆ. ಶ್ರೀರಂಗ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.Sign in to your account
Username or Email Address


Password

 Remember Me


