ಕೋಲಾರ: ಬೈಕ್ ಗೆ ಡಿಕ್ಕಿ ಹೊಡೆಯುವದನ್ನು ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮಕ್ಕಳ ಮೇಲೆ ಹರಿದು ಕಾರ್ ಪಲ್ಟಿಯಾಗಿರುವ ಘಟನೆ ಕೋಲಾರ ತಾಲೂಕಿನ ವಡಗೂರು ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಮಕ್ಕಳು ಮತ್ತು ಬೈಕ್ ಸವಾರ ಸೇರಿ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.ಸುದರ್ಶನ್ (14), ನಾರಾಯಣಸ್ವಾಮಿ (14) ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಬೈಕ್ ಸವಾರ ಸಹ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗುರುತು ತಿಳಿದು ಬಂದಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಮಕ್ಕಳು ಕೆಂಬೋಡಿ ಶಾಲೆಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.ಅಪಘಾತದ ಬಳಿಕ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಕೋಲಾರ ಎಸ್‍ಪಿ ರೋಹಿಣಿ ಸಪೇಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಕಾರ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


