ಬೆಂಗಳೂರು: ವಿದ್ಯಾರ್ಥಿ ಜೀವನದ ಟರ್ನಿಂಗ್ ಪಾಯಿಂಟ್ ಎಂದು ಹೇಳಲಾಗುವ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಶುಕ್ರವಾರದಿಂದ ಪ್ರಾರಂಭವಾಗಲಿದೆ.ಮಾರ್ಚ್ 23ರಿಂದ ಏಪ್ರಿಲ್ 4ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಮೊದಲ ದಿನವಾದ ಶುಕ್ರವಾರ ಪ್ರಥಮ ಭಾಷೆಯ ವಿಷಯಗಳ ಪರೀಕ್ಷೆ ನಡೆಯಲಿವೆ. ಈ ಬಾರಿ 8 ಲಕ್ಷದ 54 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದ್ರಲ್ಲಿ ವಿದ್ಯಾರ್ಥಿಗಳ 4 ಲಕ್ಷದ 56 ಸಾವಿರ ಬಾಲಕರು ಹಾಗೂ 3 ಲಕ್ಷದ 98 ಸಾವಿರ ಬಾಲಕಿಯರು ಇದ್ದಾರೆ.ರಾಜ್ಯಾದ್ಯಂತ 2,817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಇವುಗಳಲ್ಲಿ 45 ಸೂಕ್ಷ್ಮ ಕೇಂದ್ರಗಳು, 23 ಅತಿ ಸೂಕ್ಷ್ಮ ಕೇಂದ್ರಗಳಾಗಿವೆ. ಎಲ್ಲಾ ಕೇಂದ್ರಗಳಿಗೂ ಸಿಸಿಟಿಟಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೂ ಮೊಬೈಲ್ ಫೋನ್ ನಿಷೇಧಿಸಲಾಗಿದೆ.Sign in to your account
Username or Email Address


Password

 Remember Me


