ಬೆಂಗಳೂರು: ಬೈಕ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಳಿ ನಡೆದಿದೆ. ಘಟನೆಯಿಂದಾಗಿ ಬೈಕ್ ಸವಾರರಾದ 30 ವರ್ಷದ ಜಗದೀಶ್ ಹಾಗೂ 32 ವರ್ಷದ ಸೀನಾನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.ಡಾಬಸ್‍ಪೇಟೆ ಪೊಲೀಸರು ಕ್ಯಾಂಟರ್ ವಶಪಡಿಸಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


