ಹಾಸನ: ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್‍ವೊಂದು ಹೊತ್ತಿ ಉರಿದಿರುವ ಘಟನೆ ಹಾಸನದಲ್ಲಿ ನಡೆದಿದೆ.ಬೇಲೂರು ತಾಲೂಕಿನ ಅಂದಲೆ ಗ್ರಾಮದ ಬಳಿ ತಡರಾತ್ರಿ ಈ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇಲೂರು ಹಾಸನ ರಸ್ತೆಯಲ್ಲಿ ರಾತ್ರಿ ಸಂಚರಿಸಿದ ಪ್ರಯಾಣಿಕರು ಪೊಲೀಸರಿಗೆ ವಿಷಯ ತಿಳಿಸಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಆದ್ರೆ ಕಾರ್ ಸಂಪೂರ್ಣ ಸುಟ್ಟು ಕರಕಲಾಗಿದೆ.ಹಾಸನ ಆರ್ ಟಿಓ ನೊಂದಣಿಯ, ಮಹಿಂದ್ರಾ ಕಾರ್ ಇದಾಗಿದ್ದು ಮಾಲೀಕ ಯಾರು ಎನ್ನುವ ಕುರಿತ ತನಿಖೆ ಮುಂದುವರೆದಿದೆ. ಹಳೇಬೀಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


