ತುಮಕೂರು: ಕಿಡಿಗೇಡಿಗಳ ಅಟ್ಟಹಾಸಕ್ಕೆ ಎರಡು ಹುಲ್ಲಿನ ಬಣವೆಗಳು ಬೆಂಕಿಗಾಹುತಿಯಾದ ಘಟನೆ ತುಮಕೂರಿನ ಕೊರಟಗೆರೆ ತಾಲೂಕಿನ ಬೆಟ್ಟಶಂಭೋನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಶಿವಣ್ಣ ಎಂಬವರಿಗೆ ಸೇರಿದ ಹುಲ್ಲಿನ ಬಣವೆಗೆ ರೈತರು ಬೆಂಕಿ ಇಟ್ಟಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಹುಲ್ಲಿನ ಬಣವೆ ಸಂಪೂರ್ಣ ಸುಟ್ಟುಹೋಗಿದೆ. ತಡರಾತ್ರಿ ಘಟನೆ ನಡೆದಿದ್ದು, ಬೆಂಕಿ ನಂದಿಸಲು ಅಕ್ಕಪಕ್ಕದ ರೈತರು ಹರಸಾಹಸಪಟ್ಟರು.ಸುಮಾರು ಒಂದು ಲಕ್ಷ ರೂ. ಮೌಲ್ಯದ ಮೇವು ಇದಾಗಿತ್ತು. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


