ಕಾರವಾರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ಯುವತಿಯ ಶವ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಪತ್ತೆಯಾಗಿದೆ.ಕುಮಟಾದ ಯಾಣ ಕ್ರಾಸ್ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಂಗಳೂರು ಜಿಲ್ಲೆಯ ಸುಳ್ಯದ ಪ್ರಜ್ಞಾ ಪಿ ಎಸ್ (26) ಮತ್ತು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಸಾಲಗಾಂವನ ವಿಠ್ಠಲ ತಮ್ಮಣ್ಣನವರ್ (31) ಆತ್ಮಹತ್ಯೆ ಶರಣಾದ ಪ್ರೇಮಿಗಳು ಎಂದು ಗುರುತಿಸಲಾಗಿದೆ.ನಾಲ್ಕೈದು ದಿನದ ಹಿಂದೆ ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟು, ಪ್ರೇಮಿಗಳಿಬ್ಬರು ಬೈಕ್ ಮೇಲೆ ನಿಂತು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡೆತ್ ನೋಟಿನಲ್ಲಿ ತಮ್ಮ ಸಾವಿಗೆ ತಾವೇ ಕಾರಣ ಎಂದು ಬರೆದಿದ್ದಾರೆ.ಈ ಘಟನೆ ಕುರಿತು ಕುಮಟಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 






 Advertisement 




Sign in to your account
Username or Email Address


Password

 Remember Me


