ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ನವೆಂಬರ್ ತಿಂಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ತೇವಾಂಶ ಹೆಚ್ಚಿನ ಪ್ರಮಾಣದಲ್ಲಿರಲಿದೆ. ಹೀಗಾಗಿ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನ.9ರ ವರೆಗೂ ಮಳೆ ಪ್ರಮಾಣ ಹೆಚ್ಚಿರಲಿದೆ. ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.ನವೆಂಬರ್ 4ರಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಮಳೆಯಾಗಲಿದೆ. ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗಬಹುದು. ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಬಹುದು. ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಬಾಗಲಕೋಟೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆನಗರಗಳ ಹವಾಮಾನ ವರದಿ:
ಬೆಂಗಳೂರು: 27-20
ಮಂಗಳೂರು: 32-25
ಶಿವಮೊಗ್ಗ: 33-22
ಬೆಳಗಾವಿ: 32-21
ಮೈಸೂರು: 29-21ಮಂಡ್ಯ: 29-21
ಮಡಿಕೇರಿ: 25-17
ರಾಮನಗರ: 28-21
ಹಾಸನ: 28-19
ಚಾಮರಾಜನಗರ: 28-21
ಚಿಕ್ಕಬಳ್ಳಾಪುರ: 27-19ಕೋಲಾರ: 27-21
ತುಮಕೂರು: 30-21
ಉಡುಪಿ: 32-25
ಕಾರವಾರ: 33-26
ಚಿಕ್ಕಮಗಳೂರು: 28-19
ದಾವಣಗೆರೆ: 32-22ಹುಬ್ಬಳ್ಳಿ: 32-22
ಚಿತ್ರದುರ್ಗ: 32-21
ಹಾವೇರಿ: 33-22
ಬಳ್ಳಾರಿ: 33-23
ಗದಗ: 33-22
ಕೊಪ್ಪಳ: 33-23ರಾಯಚೂರು: 33-23
ಯಾದಗಿರಿ: 33-22
ವಿಜಯಪುರ: 33-22
ಬೀದರ್: 31-20
ಕಲಬುರಗಿ: 33-22
ಬಾಗಲಕೋಟೆ: 34-23Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


