ಗದಗ: 5 ವರ್ಷ ನಾನೇ ಸಿಎಂ ಎಂದು ಹೇಳಿದ್ದ ಸಿದ್ದರಾಮಯ್ಯ (Siddaramaiah) ಇದೀಗ ಯೂ ಟರ್ನ್ ಹೊಡೆದಿದ್ದಾರೆ. ನಾನು ಆ ಅರ್ಥದಲ್ಲಿ ಹೇಳಿಕೆಯನ್ನು ಕೊಟ್ಟಿಲ್ಲ ಎಂದು ಹೇಳುವ ಮೂಲಕ ಉಲ್ಟಾ ಹೊಡೆದಿದ್ದಾರೆ.ಗದಗದಲ್ಲಿ (Gadag) ಮಾತನಾಡಿರುವ ಸಿಎಂ, ನಮ್ಮದು ಹೈಕಮಾಂಡ್ ಪಕ್ಷ. ನಾನು ನಿನ್ನೆ ಹೇಳಿದ್ದೇ ಬೇರೆ. ನಾನು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಅಂತ ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.ರಾಜ್ಯದಲ್ಲಿ ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆ ನಡೆಯುತ್ತಿದ್ದ ವೇಳೆಯೇ ಗುರುವಾರ ವಿಜಯನಗರದಲ್ಲಿ ಮಾತನಾಡಿದ್ದ ಸಿಎಂ, 5 ವರ್ಷ ನಮ್ಮದೇ ಸರ್ಕಾರ ಇರುತ್ತದೆ. ಈಗ ನಾನು ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ವೇದಿಕೆಯಲ್ಲಿ ಅಕ್ಕಪಕ್ಕ ಕುಳಿತ್ರೂ ಸಿದ್ದು, ಡಿಕೆ ಮೌನ: ಭಾಷಣದಲ್ಲಿ ಡಿಕೆಶಿ ಹೆಸರನ್ನೇ ಮರೆತ ಸಿಎಂಈ ಹೇಳಿಕೆ ನೀಡಿದ ಬಳಿಕ ಇಂದು ಗದಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಒಂದೇ ವೇದಿಕೆಯಲ್ಲಿ ಕುಳಿತಿದ್ದರೂ ಪರಸ್ಪರ ಮಾತನಾಡಿರಲಿಲ್ಲ. ಇಬ್ಬರೂ ಕಾರ್ಯಾಕ್ರಮದ ಆರಂಭದಿಂದ ಅಂತ್ಯದವರೆಗೂ ತುಟಿ ಬಿಚ್ಚದೇ ಇದ್ದುದು ಕಂಡುಬಂದಿತ್ತು. ಕಳೆದ ದಿನದ ಸಿಎಂ ಹೇಳಿಕೆಯಿಂದ ಡಿಸಿಎಂ ಮುನಿಸಿಕೊಂಡಿರುವಂತೆ ಭಾಸವಾಗಿತ್ತು. ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು: ಈಶ್ವರಪ್ಪWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


