ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಉಪನ್ಯಾಸಕರ ಎದುರೇ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.ಕೊಪ್ಪಾ ಡಿಗ್ರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದ ವೇಳೆ ವಿದ್ಯಾರ್ಥಿಗಳ ಮಾರಾಮಾರಿ ನಡೆದಿದೆ. ಕಾರ್ಯಕ್ರಮದಲ್ಲಿ ಕುಣಿಯುವಾಗ ಮೈ-ಕೈ ತಾಗಿದ್ದಕ್ಕೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.ಉಪನ್ಯಾಸಕರ ಎದುರೇ ವಿದ್ಯಾರ್ಥಿಗಳ ಹೊಡೆದಾಟ ನಡೆದಿದ್ದು, ಬಿಡಿಸಲು ಹೋದ ಕೆಲ ಉಪನ್ಯಾಸಕರಿಗೂ ಧರ್ಮದೇಟು ಬಿದ್ದಿದೆ. ವಿದ್ಯಾರ್ಥಿಗಳು ಹೊಡೆದಾಡುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.Sign in to your account
Username or Email Address


Password

 Remember Me


