ಬೆಂಗಳೂರು: ದರೋಡೆಕೋರರು ಶಿಕ್ಷಕರೊಬ್ಬರ ಮನೆಗೆ ನುಗ್ಗಿ, ಮನೆಯಲ್ಲಿದ್ದವರ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿರುವ ಘಟನೆ ಬೆಂಗಳೂರಿನ ಕೊತ್ತನೂರಿನಲ್ಲಿ ನಡೆದಿದೆ.ಸೋಮವಾರ ರಾತ್ರಿ 8.30ರ ಸುಮಾರಿಗೆ 8 ರಿಂದ 10 ಜನ ದುಷ್ಕರ್ಮಿಗಳ ತಂಡ ಕೊತ್ತನೂರಿನ ಶಬರಿ ನಗರದಲ್ಲಿರೋ ಶಿಕ್ಷಕಿ ಅನಿತಾ ಅವರ ಮನೆಗೆ ನುಗ್ಗಿ, ಮನೆಯಲ್ಲಿದ್ದ ಮೂರು ಜನರ ಕೈಕಾಲುಗಳನ್ನ ಕಟ್ಟಿ ಮಾರಕಾಸ್ತ್ರಗಳಿಂದ ಹೆದರಿಸಿದ್ದಾರೆ. ಬಳಿಕ ತಮ್ಮ ಬಳಿ ಇದ್ದ ಚೂಪಾದ ಆಯುಧಗಳಿಂದ ಲಾಕರ್ ತೆಗೆದು ಲಕ್ಷಾಂತರ ರೂಪಾಯಿ ಮೌಲ್ಯದ 110 ಗ್ರಾಂ ಚಿನ್ನಾಭರಣ ಮತ್ತು ನಗದನ್ನು ದೋಚಿ ಎಸ್ಕೇಪ್ ಆಗಿದ್ದಾರೆ.ಬಳಿಕ ವಿಷಯ ತಿಳಿದು ಕೊತ್ತನೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆ ವೇಳೆ, ಆರೋಪಿಗಳಲ್ಲಿ ಕೆಲವರು ಹಿಂದಿ ಭಾಷೆಯಲ್ಲಿ ಮಾತನಾಡ್ತಿದ್ರು ಅನ್ನೋದು ಗೊತ್ತಾಗಿದೆ. ಉತ್ತರಭಾರತ ಮೂಲದ ಕೆಲವರು ಈ ಕೃತ್ಯದಲ್ಲಿ ಭಾಗಿಯಾಗಿರೋ ಶಂಕೆ ವ್ಯಕ್ತವಾಗಿದೆ.ಈ ಕುರಿತು ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.Sign in to your account
Username or Email Address


Password

 Remember Me


