ಮಂಡ್ಯ: ಬೈಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಸಮೀಪ ನಡೆದಿದೆ.ಕಗ್ಗಲಿಪುರ ಗ್ರಾಮದ ಸಂಜು ಕುಮಾರ್(22) ಮೃತ ದುರ್ದೈವಿ. ಭಾನುವಾರ ರಾತ್ರಿ ಈ ಅಪಘಾತ ನಡೆದಿದೆ. ಸಂಜು ಕುಮಾರ್ ರಾತ್ರಿ ತಮ್ಮ ಗ್ರಾಮದಿಂದ ಬೆಳಕವಾಡಿಗೆ ತೆರಳುತ್ತಿದ್ದರು. ಬೆಳಕವಾಡಿಯಿಂದ ಮತ್ತೊಂದು ಬೈಕ್ ಬರುತ್ತಿತ್ತು. ಈ ವೇಳೆ ವೇಗವಾಗಿ ಬಂದ ಎರಡು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಸಂಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಮೊತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಮೃತ ಸಂಜು ಕುಮಾರ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.ಈ ಘಟನೆ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 Advertisement 







 Advertisement 




Sign in to your account
Username or Email Address


Password

 Remember Me


