ಹಾಸನ: ನಗರದ ಹೊರವಲಯದ ಮಣಚನಹಳ್ಳಿ ಬಳಿ ಶನಿವಾರ ಸಂಜೆ ನಡೆದಿದ್ದ ಕಾಲೇಜು ವಿದ್ಯಾರ್ಥಿನಿ ಅಪಹರಣ ಪ್ರಕರಣದ ಬಗ್ಗೆ ಈವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.ಹಾಸನದ ಸೇಂಟ್ ಫಿಲೋಮಿನಾ ಕಾಲೇಜಿನಲ್ಲಿ 2 ನೇ ವರ್ಷದ ಬಿಕಾಂ ಓದುತ್ತಿರುವ ಮಣಚನಹಳ್ಳಿ ಗ್ರಾಮದ ಪೂಜಾ ಎಂಬ ವಿದ್ಯಾರ್ಥಿನಿಯನ್ನು ಸಿನಿಮೀಯ ರೀತಿಯಲ್ಲಿ ಕಿಡ್ನಾಪ್ ಮಾಡಲಾಗಿದೆ.ಪೂಜಾ ನಿನ್ನೆ ಸಂಜೆ ಕಾಲೇಜು ಮುಗಿಸಿ ತನ್ನ ಬಾವನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಇನ್ನೋವಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಲವಂತವಾಗಿ ಪೂಜಾಳನ್ನು ಕರೆದುಕೊಂಡು ಪರಾರಿಯಾಗಿದ್ದರು. ಪ್ರಕರಣದ ಹಿಂದೆ ಅದೇ ಗ್ರಾಮದ ಹಾಲಿನ ಡೈರಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಲಾಷ್ ಎಂಬಾತನ ಕೈವಾಡ ಇದೆ ಎಂದು ಶಂಕಿಸಲಾಗಿದೆ.ಪೂಜಾ ಮತ್ತು ಅಭಿಲಾಷ್ ಕಳೆದ ಮೂರ್ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ ಇವರಿಬ್ಬರ ಪ್ರೀತಿಗೆ ಯುವತಿ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಅಭಿಲಾಷ್ ತನ್ನ ಸ್ನೇಹಿತರ ಜೊತೆ ಸೇರಿ ಪೂಜಾಳನ್ನು ಮದುವೆಯಾಗುವುದಕ್ಕಾಗಿಯೇ ಅಪಹರಣ ಮಾಡಿದ್ದಾನೆ ಎಂಬ ಮಾತು ಕೇಳಿಬರುತ್ತಿದೆ. ಹೀಗಾಗಿ ಇಬ್ಬರೂ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಅಂತಾ ಹೇಳಲಾಗುತ್ತಿದೆ.ಈ ಸಂಬಂಧ ಪೆನ್ಷನ್ ಮೊಹಲ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.






 Advertisement 




Sign in to your account
Username or Email Address


Password

 Remember Me


