ಬೀದರ್: ಅಫಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಜಿಲ್ಲಾಧಿಕಾರಿ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಬೀದರ್ ತಾಲೂಕಿನ ಅಮಿಲಾಪೂರ್ ಗ್ರಾಮದ ಬಳಿ ನಡೆದಿದೆ.ಶಿವಕುಮಾರ್ (40) ಟ್ರ್ಯಾಕ್ಟರ್ ಡಿಕ್ಕಿಯಾಗಿ ಬಿದ್ದು ರಸ್ತೆಯಲ್ಲಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಡಿಸಿ ಎಚ್.ಆರ್ ಮಹದೇವ ಆಂಬುಲೆನ್ಸ್ ಗೆ ಕರೆ ಮಾಡಿದ್ರು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ನಂತರ ತಮ್ಮ ಕಾರಿನಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ವ್ಯಕ್ತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದ್ರೆ ಸಿಬ್ಬಂದಿಗಳು ರೋಗಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ನೀಡಲಿಲ್ಲ. ಈ ವೇಳೆ ಆಸ್ಪತ್ರೆಯ ಸಿಬ್ಬಂದಿಗಳನ್ನು ಡಿಸಿ ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾಧಿಕಾರಿ ತರಾಟೆಯ ಬಳಿಕ ಚಿಕಿತ್ಸೆ ನೀಡಿ ವ್ಯಕ್ತಿಯನ್ನು ಪ್ರಾಣ ಅಪಾಯದಿಂದ ಪಾರು ಮಾಡಲಾಗಿದೆ.ಒಟ್ಟಿನಲ್ಲಿ ಸರಿಯಾದ ಸಮಯಕ್ಕೆ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆದ ಜಿಲ್ಲಾಧಿಕಾರಿಗೆ ಜಿಲ್ಲೆಯ ಜನರು ಸಲಾಂ ಹಾಕುತ್ತಿದ್ದಾರೆ.Sign in to your account
Username or Email Address


Password

 Remember Me


