ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನದಲ್ಲಿ ಆಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸುಮಾರು ನಾಲ್ಕು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಜೆಟ್ ವಿಮಾನದ ಟಾಯ್ಲೆಟ್ ನಲ್ಲಿ ಅಕ್ರಮ ಚಿನ್ನವನ್ನು ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.ವಿಮಾನದ ಟಾಯ್ಲೆಟ್ ನಲ್ಲಿ ತಲಾ ಒಂದು ಕೆಜಿ ತೂಕದ 4 ಚಿನ್ನದ ಬಿಸ್ಕತ್ತು ಅಡಗಿಸಿ ಇಡಲಾಗಿತ್ತು. ಇವು ಸುಮಾರು 1.20ಕೋಟಿ ಮೌಲ್ಯವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಚಿನ್ನವನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.Sign in to your account
Username or Email Address


Password

 Remember Me


