ಮಂಡ್ಯ: ಯುಗಾದಿ ಹಬ್ಬದಂದೇ ಬೆಳ್ಳಂಬೆಳಗ್ಗೆ ಎರಡು ಬೈಕ್‍ಗಳಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಚಿನ ಕೋಟೆ ಗೇಟ್ ಬಳಿ ನಡೆದಿದೆ.ತಮ್ಮಯ್ಯ (45) ಮೃತ ದುರ್ದೈವಿ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಎನ್‍ಎಚ್ 75 ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಬೆಂಗಳೂರಿನಿಂದ ಹಬ್ಬಕ್ಕೆ ಬೈಕ್‍ನಲ್ಲಿ ಊರಿಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಬಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ತಿಮ್ಮಯ್ಯ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತಕ್ಕೆ ಟೋಲ್‍ನ ಲಂಕೋ ಕಂಪೆನಿಯ ನಿರ್ಲಕ್ಷ್ಯವೇ ಕಾರಣವಾಗಿದ್ದು, ಕಳೆದ ಒಂದು ವರ್ಷದಿಂದ ಸೇತುವೆ ಕೆಲಸ ಮುಗಿಸದೆ ಕಾಮಗಾರಿ ನಡೆಯುತ್ತಿರುವುದರಿಂದ ಪದೇ ಪದೇ ಇಲ್ಲಿ ಅಪಘಾತ ಸಂಭವಿಸುತ್ತಿವೆ. ಸುಂಕ ಕಟ್ಟಿಸಿಕೊಂಡು ಸೇತುವೆ ಕಾರ್ಯ ಮುಗಿಸದ ಟೋಲ್ ಕಂಪೆನಿಯ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ.ಈ ಘಟನೆ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಬಳಿಕ ಚಾಲಕ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಸದ್ಯಕ್ಕೆ ಕಾರನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


