ಶಿವಮೊಗ್ಗ: ವಿದ್ಯಾರ್ಥಿನಿ ಮೇಲೆ ಶಿಕ್ಷಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯ ಸಾಗರದಲ್ಲಿ ನಡೆದಿದೆ.ಜಿಲ್ಲೆಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೈಸ್ಕೂಲ್ ಶಿಕ್ಷಕ ಈ ಕೃತ್ಯ ಎಸಗಿದ್ದು, ಅತ್ಯಾಚಾರ ಮಾಡಿದ ಶಿಕ್ಷಕ ಪ್ರಕಾಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿ ಶಿಕ್ಷಕನ ವಿರುದ್ಧ ಪೋಸ್ಕೋ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಶಾಲೆಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮನೆಯ ಸಮೀಪವೇ ಈ ಶಿಕ್ಷಕ ಮನೆ ಮಾಡಿದ್ದನು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸಂತ್ರಸ್ತೆಯನ್ನು ಪಾಠ ಹೇಳಿಕೊಡುವ ನೆಪದಲ್ಲಿ ಕರೆಸಿಕೊಂಡು ಅತ್ಯಾಚಾರವೆಸಗಿದ್ದಾನೆ. ಅಷ್ಟೇ ಅಲ್ಲದೇ ಇದೇ ಚಾಳಿ ಮುಂದುವರೆಸಿದ್ದು, ಪದೇ ಪದೇ ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾನೆ.ಈ ವಿಚಾರ ಸಂತ್ರಸ್ತೆಯ ಪೋಷಕರಿಗೆ ತಿಳಿದ ನಂತರ ಅವರು ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಾಗರ ಟೌನ್ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದು, ದೂರಿನ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.






 Advertisement 




Sign in to your account
Username or Email Address


Password

 Remember Me


