ರಾಮನಗರ: ಶಾರ್ಟ್ ಸರ್ಕ್ಯೂಟ್ ನಿಂದ ವಾಹನಗಳ ಬಿಡಿಭಾಗದ ಅಂಗಡಿಗೆ ಬೆಂಕಿ ಬಿದ್ದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಚನ್ನಪಟ್ಟಣದ ಸಾತನೂರು ಸರ್ಕಲ್ ಬಳಿ ನಡೆದಿದೆ.ಮದ್ದೂರು ಮೂಲದ ರಘು ಎಂಬವರ ಅಂಗಡಿಯಲ್ಲಿ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿಯಲ್ಲಿ ಆಯಿಲ್ ಶೇಖರಣೆ ಮಾಡಿದ್ದು ಬೆಂಕಿ ಹೆಚ್ಚಾಗಲು ಕಾರಣವಾಗಿದೆ.ಆಯಿಲ್ ಗೆ ಬೆಂಕಿ ಹೊತ್ತಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಸಂಪೂರ್ಣವಾಗಿ ಅಂಗಡಿ ಪೂರ್ತಿ ಆವರಿಸಿದೆ. ಅಲ್ಲದೇ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಾಹನಗಳ ಬಿಡಿಭಾಗಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಘಟನೆ ಸಂಬಂಧ ಚನ್ನಪಟ್ಟಣ ಟೌನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.Sign in to your account
Username or Email Address


Password

 Remember Me


