ಚಿಕ್ಕಬಳ್ಳಾಪುರ: ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.ಗೋಪಸಂದ್ರ ಗ್ರಾಮದ 30 ವರ್ಷದ ವೀಣಾ ಮೃತ ಮಹಿಳೆ. ಮಹಿಳೆಯ ಸಾವಿನ ವಿಷಯ ತಿಳಿದ ಸಂಬಂಧಿಕರು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ನರಸಿಂಹಮೂರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆಸ್ಪತ್ರೆಯಲ್ಲಿ ದಾಂಧಲೆಗೆ ಮುಂದಾಗಿದ್ದರು. ಆದ್ರೆ ಮಹಿಳೆಗೆ ಲೋ ಬಿಪಿಯಾದ ಕಾರಣ ಹೃದಯಾಘಾತವಾಗಿದೆ ಅಂತ ವೈದ್ಯರು ಹೇಳಿದ್ದಾರೆ.ಈ ಸಂಬಂಧ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ವೈದ್ಯ ನರಸಿಂಹಮೂರ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


