ಚಾಮರಾಜನಗರ: ರೈಲ್ವೇ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳಲು ಗುರುವಾರ ರಾತ್ರಿಯೇ ಪ್ರಯತ್ನಿಸಿದ್ದ ಅಪರಿಚಿತ ವ್ಯಕ್ತಿಗೆ ಚಾಮರಾಜನಗರದ ರೈಲ್ವೇ ಸಿಬ್ಬದಿ ಬೈದು ಬುದ್ಧಿವಾದ ಹೇಳಿ ಕಳುಹಿಸಿದ್ದರು. ಆದರೆ ಇಂದು ಬೆಳಗ್ಗೆ ಅದೇ ಸ್ಥಳಕ್ಕೆ ಆಗಮಿಸಿದ ಆತ ಚಾಮರಾಜನಗರದಿಂದ ಮೈಸೂರಿಗೆ ತೆರಳುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಸದ್ಯ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಯಾರು ಎಂಬ ಮಾಹಿತಿ ತಿಳಿದು ಬಂದಿಲ್ಲ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯ ಮೃತ ದೇಹವನ್ನು ಚಾಮರಾಜನಗರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಟ್ಟಿದ್ದಾರೆ. ಘಟನೆ ಕುರಿತು ಚಾಮರಾಜನಗರ ರೈಲ್ವೇ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.Sign in to your account
Username or Email Address


Password

 Remember Me


