ಚಿಕ್ಕಬಳ್ಳಾಪುರ: ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ರೂಪುಗೊಳ್ಳುತ್ತಿರುವ ನ್ಯಾಷನಲ್ ಹೈವೇ 224 ರ ಅವೈಜ್ಞಾನಿಕ ಕಾಮಗಾರಿಗೆ ಬೈಕ್ ಸವಾರರೊಬ್ಬರು ಬಲಿಯಾಗಿದ್ದಾರೆ.ಗೌಡಗೆರೆ ಗ್ರಾಮದ 30 ವರ್ಷದ ದೇವರಾಜ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ-ಗೌರಿಬಿದನೂರು ಮಾರ್ಗದ ಪೋಶೆಟ್ಟೆಹಳ್ಳಿ ಬಳಿ ಮೋರಿ ನಿರ್ಮಾಣಕ್ಕೆ ಎಂದು ಅಗೆಯಲಾಗಿದ್ದ ಬೃಹತ್ ಗುಂಡಿಗೆ ಬೈಕ್ ಸಮೇತ ಸವಾರ ಬಿದ್ದು ಸಾವನ್ನಪ್ಪಿದ್ದಾರೆ.ಈ ಸಂಬಂಧ ಮೃತನ ಸಂಬಂಧಿಕರು ಹಾಗೂ ಸ್ಥಳೀಯ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೌರಿಬಿದನೂರು-ಚಿಕ್ಕಬಳ್ಳಾಪುರ ಮಾರ್ಗದ ರಸ್ತೆ ತಡೆ ನಡೆಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಚಿಕ್ಕಬಳ್ಳಾಪುರ ಡಿವೈಎಸ್‍ಪಿ ಹಾಗೂ ಪೊಲೀಸರು ಪ್ರತಿಭಟನಕಾರರ ಮನವೊಲಿಸಿದ್ದಾರೆ. ಈ ಹಿಂದೆಯೂ ಸಹ ಹಲವು ಬೈಕ್ ಸವಾರರು ಈ ಹೆದ್ದಾರಿ ಕಾಮಗಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.






 Advertisement 




Sign in to your account
Username or Email Address


Password

 Remember Me


