ಬೆಂಗಳೂರು: ಗೆಳತಿಯ ಹುಟ್ಟುಹಬ್ಬಕ್ಕೆ ಕಳುಹಿಸಲು ಪೋಷಕರು ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅರ್ಪಿತಾ(18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪಿಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಅರ್ಪಿತಾ ತನ್ನ ಗೆಳತಿಯ ಹುಟ್ಟುಹಬ್ಬಕ್ಕೆ ಹೋಗಲು ಪೋಷಕರ ಹತ್ತಿರ ಕೇಳಿಕೊಂಡಿದ್ದಾಳೆ. ಆದರೆ ಅರ್ಪಿತಾ ಪೋಷಕರು ಆಕೆಯನ್ನು ಕಳುಹಿಸಿಲು ನಿರಾಕರಿಸಿದ್ದರು.ಪೋಷಕರ ನಡೆಯಿಂದ ಬೇಸತ್ತ ಅರ್ಪಿತಾ ಯಾರೂ ಇಲ್ಲದ ವೇಳೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಇಂದು ಬೆಳಗ್ಗೆ ರೂಮ್ ಬಾಗಿಲು ತೆಗೆದ ವೇಳೆ ಘಟನೆ ಬೆಳಕಿಗೆ ಬಂದಿದೆ.ಸದ್ಯ ಘಟನಾ ಸ್ಥಳಕ್ಕೆ ಕೆಂಪೇಗೌಡ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.Sign in to your account
Username or Email Address


Password

 Remember Me


