ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅನಿಲ್ ಕೊಲೆಯಾದ ವ್ಯಕ್ತಿ. ಈತ ಪೇಂಟರ್ ಕೆಲಸ ಮಾಡಿಕೊಂಡಿದ್ದನು. ಗುರುವಾರ ಕಮರ್ಷಿಯಲ್ ಸ್ಟ್ರೀಟ್ ನಲ್ಲಿರುವ ಜ್ಯುವೆಲ್ಲರಿ ಸ್ಟ್ರೀಟ್ ನ ಬಾರೊಂದರಲ್ಲಿ ಮದ್ಯಪಾನ ಮಾಡಿ ಹೋಗುತ್ತಿದ್ದ. ಈ ವೇಳೆ ರೌಡಿಶೀಟರ್ ಶಿವು ಅದೇ ಮಾರ್ಗವಾಗಿ ಹೋಗುತ್ತಿದ್ದನು. ಆ ಸಂದರ್ಭದಲ್ಲಿ ಅನಿಲ್ ಆತನ ಬಳಿ ಮದ್ಯಪಾನ ಮಾಡಲು ಹಣವನ್ನು ಕೇಳಿದ್ದಾನೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಪರಿಣಾಮ ರೌಡಿಶೀಟರ್ ಶಿವು ಅನಿಲ್ ನನ್ನು ನೆಲಕ್ಕೆ ಕೆಡವಿ ಕಲ್ಲಿನಿಂದ ಜಜ್ಜಿ ಕೊಲೆಗೈದಿದ್ದಾನೆ.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಆರೋಪಿ ಶಿವು ನನ್ನು ಬಂಧಿಸಿದ್ದಾರೆ. ಬಂಧಿತ ಶಿವು ಈ ಹಿಂದೆ ಅಶೋಕ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ಯತ್ನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಸೇರಿದ್ದನು. ಮೂರು ದಿನಗಳ ಹಿಂದೆ ಶಿವು ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ.Sign in to your account
Username or Email Address


Password

 Remember Me


