ಬೆಂಗಳೂರು: ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿ ಕಾರಿನ ಮೇಲೆ ಉರುಳಿ ಬಿದ್ದ ಘಟನೆ ನಗರದ ಸಿಲ್ಕ್ ಬೋರ್ಡ್ ಸರ್ಕಲ್ ನಲ್ಲಿ ನಡೆದಿದೆ.ಹೊಸೂರು ಮಾರ್ಗವಾಗಿ ಬರುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ಸಿಲ್ಕ್ ಬೋರ್ಡ್ ಸರ್ಕಲ್ ಬಳಿ ಬರುತ್ತಿದಂತೆ ಚಾಲಕನ ನಿಯಂತ್ರಣ ತಪ್ಪಿ ಸ್ಕೋಡಾ ಕಾರಿನ ಹಿಂಭಾಗದ ಮೇಲೆ ಉರುಳಿದೆ. ಪರಿಣಾಮವಾಗಿ ಕಾರಿನ ಹಿಂಭಾಗ ಸಂಪೂರ್ಣ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಹಾಗೂ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತ ನಡೆದ ಕಾರಣ ಹೊಸೂರು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯಿಂದ ಪರದಾಟ ನಡೆಸಿದ್ದಾರೆ. ಇದೇ ಮಳೆ ತುಂತುರು ಮಳೆ ಆರಂಭವಾಗಿದ್ದು ಪೊಲೀಸರು ಟ್ರಾಫಿಕ್ ಸಮಸ್ಯೆ ನಿವಾರಿಸಲು ಹರಸಾಹಸ ಪಟ್ಟಿದ್ದಾರೆ.Sign in to your account
Username or Email Address


Password

 Remember Me


