ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಡಿವೈಡರ್ ಮೇಲೆ ಏರಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಬಿಎಲ್‍ಡಿಇ ಕಾಲೇಜಿನ ಎದುರು ನಡೆದಿದೆ.ಇಂದು ನಸುಕಿನ ಜಾವ ಸುಮಾರು 4 ಗಂಟೆಗೆ ಈ ಘಟನೆ ನಡೆದಿದ್ದು, ಅದೃಷ್ಟವಶಾತ್ ಈ ಅವಘಡದಲ್ಲಿ ಪ್ರಾಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಮೂರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬಾಗೇವಾಡಿಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಕೆಎ 36 ಎಫ್ 1370 ಸಂಖ್ಯೆಯ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇದಾಗಿದೆ. ಪುಣೆ-ದೇವದುರ್ಗ ನಡುವೆ ಸಂಚರಿಸುವ ಬಸ್ ವಿಜಯಪುರದಿಂದ ಬಾಗೇವಾಡಿಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಏರಿದೆ.ಘಟನೆ ನಡೆದ ಸ್ಥಳಕ್ಕೆ ಬಸವನ ಬಾಗೇವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






 Advertisement 




Sign in to your account
Username or Email Address


Password

 Remember Me


