ಬೆಂಗಳೂರು: ಶಾಲೆಯಲ್ಲಿ ಮಕ್ಕಳು ವಿದ್ಯೆ ಕಲಿಯಲು ಬರುತ್ತಾರೆ. ಶಾಲೆಯನ್ನ ವಿದ್ಯಾದೇಗುಲ ಎಂದು ಪೂಜೆ ಮಾಡುತ್ತಾರೆ. ಅದರೆ ಅಂತಹ ಶಾಲೆಯಲ್ಲಿ ವಿದ್ಯಾರ್ಥಿಗಳು ಗಾಂಜಾ ಹೊಡೆದು ಪುಂಡಾಟ ನಡೆಸ್ತಾರೆ ಎಂದರೆ ಎಲ್ಲರೂ ಸಹ ಒಂದು ನಿಮಿಷ ಶಾಕ್ ಗೆ ಒಳಗಾಗ್ತಾರೆ.ಬೆಂಗಳೂರು ಹೊರವಲಯದ ಹೊಸಕೋಟೆ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಗಾಂಜಾ ಹೊಡೆಯುವುದಲ್ಲದೇ ಶಾಲೆಗೆ ಚಕ್ಕರ್ ಹಾಕಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಶಾಲೆಗೆ ಸ್ಥಳೀಯರು ದೂರು ನೀಡಿದ್ದು, ನಮ್ಮ ಮೇಲೆ ದೂರು ಕೊಡುತ್ತೀರಾ ಎಂದು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಮನೆಯಲ್ಲಿದ್ದವರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದಾರೆ. ಗಾಂಜಾ ಮತ್ತಿನಲ್ಲಿ 5 ಮನೆಗಳ ಗಾಜು ಒಡೆದು ದಾಂಧಲೆ ನಡೆಸಿದ್ದಾರೆ.ಈ ಬಗ್ಗೆ ಶಾಲೆಯ ಪಕ್ಕದಲ್ಲಿಯೇ ಇರುವ ಹೊಸಕೋಟೆ ಪೊಲೀಸರಿಗೆ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Sign in to your account
Username or Email Address


Password

 Remember Me


