ರಾಮನಗರ: ಫೇಸ್‍ಬುಕ್ ಹಾಗೂ ವಾಟ್ಸಾಪ್‍ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಮಾಗಡಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪುರಸಭೆ ಸದಸ್ಯರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ.ಕಳೆದ ಮೂರು ತಿಂಗಳಿನಿಂದ ಬಂಡಾಯ ಶಾಸಕ ಎಚ್.ಸಿ ಬಾಲಕೃಷ್ಣ ಹಾಗೂ ಜೆಡಿಎಸ್ ನ ಎ. ಮಂಜುನಾಥ್ ಅವರು ಪಕ್ಷಾಂತರ ಹಾಗೂ ಕೆಲವು ವಿಚಾರಗಳಿಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಾರ್ ಶುರುವಾಗಿದೆ. ತಮ್ಮ ನಾಯಕರುಗಳ ಪರವಾಗಿ ಪೋಸ್ಟ್ ಮಾಡಿ ವಿರೋಧಿಗಳನ್ನ ಜರಿದಿದ್ದಾರೆ.ಈ ವಿಚಾರವಾಗಿ ಮಂಗಳವಾರ ರಾತ್ರಿ ಮಾಗಡಿ ಪುರಸಭೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಸದಸ್ಯರು ಮಾತಿನ ಚಕಮಕಿ ನಡೆಸಿ ಕೈಕೈ ಮಿಲಾಯಿಸಿದ್ದಾರೆ. ಘಟನೆಯಲ್ಲಿ ಬಂಡಾಯ ಶಾಸಕ ಎಚ್.ಸಿ ಬಾಲಕೃಷ್ಣ ಬೆಂಬಲಿಗರಾದ ಪುರಸಭೆಯ ಮಾಜಿ ಅದ್ಯಕ್ಷ ಪುರುಷೋತ್ತಮ ಹಾಗೂ ಅವರ ಸಹವರ್ತಿಗಳು ಜೆಡಿಎಸ್ ನ ಬಾಲರಘು, ಜವರೇಗೌಡ, ಮುನಿರಾಜು ನಡುವೆ ಮಾತಿನ ಚಕಮಕಿ ನಡೆಸಿ ಹಲ್ಲೆ ಮಾಡಿದ್ದಾರೆ.ಘಟನೆ ಸಂಬಂಧ ಎರಡು ಬಣದವರು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.Sign in to your account
Username or Email Address


Password

 Remember Me


