ರಾಮನಗರ: ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಟಾಂಗ್ ಕೊಟ್ಟಿದ್ದಾರೆ. ಡಿ.ಕೆ.ಶಿವಕುಮಾರ್‌ ಸಿಎಂ ಆಗೇ ಆಗ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ‌ಒಂದೂವರೆ ವರ್ಷದ ಬಳಿಕ ಡಿ.ಕೆ.ಶಿವಕುಮಾರ್ (D.K.Shivakumar) ಸಿಎಂ ಆಗೇ ಆಗ್ತಾರೆ. ಅವರು ಸಿಎಂ ಆಗಬೇಕು ಅನ್ನೋದು ನಮ್ಮ ಆಸೆ. ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ಶಕ್ತಿ ಮೀರಿ ಕೆಲಸ ಮಾಡಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಕೆಶಿ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಇದನ್ನೂ ಓದಿ: ಚಿಣ್ಣರ ಬಿಂಬ ಸಾಂಸ್ಕೃತಿಕ ಸಂಸ್ಥೆ ಮುಡಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಡಿ.ಕೆ.ಶಿವಕುಮಾರ್‌ಗೆ ಅವಕಾಶ ಸಿಗಲೇಬೇಕು. ರಾಜ್ಯದ ಜನತೆ ಕೂಡಾ ಅದನ್ನೇ ಬಯಸಿದ್ದಾರೆ. ಈ ಭಾಗದ ಜನ ನಮಗೆ ಹೆಚ್ಚು ಸ್ಥಾನ ನೀಡಲೂ ಅದೇ ಕಾರಣ ಎಂದು ಡಿಕೆಶಿ ಸಂಘಟನೆಯನ್ನು ಬಣ್ಣಿಸಿದ್ದಾರೆ.ಸಿಎಂ ಬದಲಾವಣೆ ಬಗ್ಗೆ ಮಾತನಾಡುವವರು ಕೆಲಸಕ್ಕೆ ಬಾರದವರು ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಮಾತನಾಡಿ, ಇಲ್ಲಿ ಕೆಲಸಕ್ಕೆ ಬಾರದವರು ಯಾರೂ ಇಲ್ಲ. ಎಲ್ಲರೂ ಕೆಲಸಕ್ಕೆ ಬರುವವರೇ. ಅವರನ್ನ ಶಾಸಕ ಅಂತ ಕರೆಯುತ್ತಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಬಾರದು. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅಷ್ಟೆ. ಆದರೆ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ಮಾಡಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರೈತರ ಮೇಲೆ ಗ್ಯಾರಂಟಿ ಬರೆ – ಟಿಸಿ ಸಹಿತ ‌ವಿದ್ಯುತ್ ಸಂಪರ್ಕ ಯೋಜನೆ ರದ್ದುರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ. ಈ ಕುರಿತು ಬಳ್ಳಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಐದು ವರ್ಷದ ನಮ್ಮದೇ ಸರ್ಕಾರ ಇರುತ್ತದೆ. ನಾನು ಈಗ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 


















Sign in to your account
Username or Email Address


Password

 Remember Me


