ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನೇ ಇಲ್ಲ. ಅವರು ಗೂಂಡಾಗಳ ಕೈಗೆ ಕಾನೂನು ಕೊಟ್ಟುಬಿಟ್ಟಿದ್ದಾರೆ. ಪೊಲೀಸರ ಕೈಯಲ್ಲಿ ಲಾಠಿಯಿಲ್ಲ. ಈ ಲಾಠಿಯನ್ನು ಗೂಂಡಾಗಳ ಕೈಗೆ ಕೊಟ್ಟಿದ್ದಾರೆ. ಹೀಗಾಗಿ ಇಡೀ ಬೆಂಗಳೂರನ್ನು ಡಾನ್ ಗಳು ಆಳುತ್ತಿದ್ದಾರೆ ಅಂತ ಮಾಜಿ ಡಿಸಿಎಂ ಆರ್ ಅಶೋಕ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ನಗರದ ದಾಸರಹಳ್ಳಿಯಲ್ಲಿ ನಡೆಯುತ್ತಿರುವ ಬಿಜೆಪಿ ಪಾದಯಾತ್ರೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಂಜಾ ಮಾಫಿಯಾಗಳು, ಅಂತರಾಷ್ಟ್ರೀಯ ಮಟ್ಟದ ಡಾನ್ ಗಳು ನಗರವನ್ನು ತಮ್ಮ ಹತೋಟಿಗೆ ತರುತ್ತಿದ್ದಾರೆ. ಹೀಗಾಗಿ ಸಿಎಂ ಹಾಗೂ ಪೊಲೀಸರ ಕೈಯಲ್ಲಿ ಅಧಿಕಾರವಿಲ್ಲ ಸರ್ಕಾರದ ವಿರುದ್ದ ಐಪಿಎಸ್ ಅಧಿಕಾರಿಗಳೇ ತಿರುಗಿ ಬಿದ್ದಿದ್ದಾರೆ. ಇದು ಸಿದ್ದರಾಮಯ್ಯ ಸರ್ಕಾರದ ಕೆಲಸ ತೋರಿಸುತ್ತದೆ ಅಂತ ವಾಗ್ದಾಳಿ ನಡೆಸಿದ್ದಾರೆ.ಸಿದ್ದರಾಮಯ್ಯ ಸರ್ಕಾರ 10% ಸರ್ಕಾರ ಅಲ್ಲ. 65% ಕಮೀಷನ್ ಸರ್ಕಾರ. ವೈಟ್ ಟ್ಯಾಪಿಂಗ್ ಕಾಮಗಾರಿಯಲ್ಲಿ 65%ರಷ್ಟು ಕಮಿಷನ್ ಹೊಡೆಯುತ್ತಿದ್ದಾರೆ. ಜನರ ಹಣವನ್ನು ಸಿಎಂ ಸಿದ್ದರಾಮಯ್ಯ ಲೂಟಿ ಹೊಡೆತಿದ್ದಾರೆ ಎಂದು ಆರೋಪಿಸಿದ್ದಾರೆ.Sign in to your account
Username or Email Address


Password

 Remember Me


