ಬೆಂಗಳೂರು: ದುಬಾರಿ ಡಿಎಸ್‍ಎಕೆ ಬೆನೆಲ್ಲೆ ಬೈಕಿನಲ್ಲಿ ಜಾಲಿ ರೈಡ್ ಮಾಡಲು ಹೋಗಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಹಾಗೂ ಬೈಕ್ ಸವಾರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ತಿರುಮಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ.ಮೃತ ಬೈಕ್ ಸವಾರನನ್ನು ಕೋರಮಂಗಲ ನಿವಾಸಿ ಹರ್ಷ(28) ಎಂದು ಗುರುತಿಸಲಾಗಿದ್ದು, ಪಾದಚಾರಿ ಬಿಹಾರ ಮೂಲದ ಮಹೇಶ್(24)ಎಂದು ಗುರುತಿಸಲಾಗಿದೆ. ವಾರಾಂತ್ಯವಾದ ಕಾರಣ ರಾಷ್ಟ್ರೀಯ ಹೆದ್ದಾರಿಯಲ್ಲಿ ಹರ್ಷ ಹಾಗೂ ಆತನ ಸ್ನೇಹಿತರು ದುಬಾರಿ ಬೈಕ್ ಗಳಲ್ಲಿ ಜಾಲಿ ರೈಡ್ ಹೋಗುತ್ತಿದ್ದರು. ವೇಗವಾಗಿ ಸಾಗುತ್ತಿದ್ದ ವೇಳೆ ತಿರುಮಗೊಂಡನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಮಹೇಶ್ ಅವರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸುಮಾರು 200 ಮೀಟರ್ ದೂರಕ್ಕೆ ಎಳೆದೊಯ್ದಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ.ಹರ್ಷ ರೈಡ್ ಮಾಡುತ್ತಿದ್ದ ಬೆನೆಲ್ಲಿ ಬೈಕಿಗೆ ಭಾರತದಲ್ಲಿ 5.5 ಲಕ್ಷ ರೂ. ಬೆಲೆಯಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Sign in to your account
Username or Email Address


Password

 Remember Me


