ವಿಜಯಪುರ: ಆತ್ಮರಕ್ಷಣೆಗಾಗಿ ಪೊಲೀಸರು ರೌಡಿ ಶೀಟರ್ ಮೇಲೆ ಫೈರಿಂಗ್ ನಡೆಸಿರುವ ಘಟನೆ ನಗರದ ನವಭಾಗ್ ಪ್ರದೇಶದಲ್ಲಿ ನಡೆದಿದೆ.ವಿವಿಧ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ 25 ವರ್ಷದ ಯುನುಸ್ ಅಕ್ಲಾಸ್ ಪಟೇಲ್ ನನ್ನು ಬಂಧಿಸಲು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಮುಂದಾಗಿದ್ದನು. ಘಟನೆಯಲ್ಲಿ ಪೊಲೀಸ್ ಪೇದೆ ಮಾದನಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ಇದೇ ವೇಳೆ ಪೊಲೀಸ್ ಠಾಣಾ ಪಿಎಸೈ ಆರೀಫ್ ಮುಶಾಪುರೆ ಅವರು ತಮ್ಮ ಆತ್ಮರಕ್ಷಣೆಗೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ.
ಒಂದು ಸುತ್ತು ಗಾಳಿಯಲ್ಲಿ, ಮತ್ತೊಂದು ಮಿಸ್, ಮೂರನೇ ಗುಂಡು ರೌಡಿ ಶೀಟರ್ ಯುನೀಸ್ ಎಡಗಾಲಿಗೆ ತಾಗಿದೆ. ಸದ್ಯ ಗುಂಡೇಟಿನಿಂದ ಗಾಯಗೊಂಡ ಆರೋಪಿ ಯುನೀಸ್ ನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಗಾಂಧಿ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.Sign in to your account
Username or Email Address


Password

 Remember Me


