ಹಾವೇರಿ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ನಾಗನೂರು ಕೆರೆಯಲ್ಲಿ ನಡೆದಿದೆ.ಮೃತ ಬಾಲಕರನ್ನು ಸಾಹಿಲ್ ಹಾವೇರಿ(14) ಮತ್ತು ಖಾಜಾ ಮಂತ್ರೋಡಿ(14) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಪಟ್ಟಣದ ಮೌಲಾಲಿ ಬಡಾವಣೆಯ ನಿವಾಸಿಗಳು ಎನ್ನಲಾಗಿದೆ. ಮಧ್ಯಾಹ್ನ ಸೈಕಲ್ ಮೇಲೆ ಕೆರೆಗೆ ಈಜಲು ತೆರಳಿದ್ದರು, ಈ ವೇಳೆ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಲ್ಲಿ ಶೋಧಕಾರ್ಯ ನಡೆಸಿ ಮೃತ ದೇಹಗಳನ್ನ ಹೊರತೆಗಿದ್ದಾರೆ. ತಾಲೂಕು ಆಸ್ಪತ್ರೆಗೆ ಶಾಸಕ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.ಸ್ಥಳಕ್ಕೆ ಶಿಗ್ಗಾಂವಿ ಠಾಣೆ ಪಿಎಸ್‍ಐ ಅನ್ನಪೂರ್ಣ ಹುಲಗೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.Sign in to your account
Username or Email Address


Password

 Remember Me


