ದಾವಣಗೆರೆ: ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯ ಹೊಟ್ಟೆಯಲ್ಲಿಯೇ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸರ್ಕಾರಿ ಹಳೇ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ.ಚನ್ನಗಿರಿ ತಾಲೂಕಿನ ತ್ಯಾವಣಗಿ ಗ್ರಾಮದ ರೇಣುಕಾ(22) ವೈದ್ಯರ ನಿರ್ಲಕ್ಷ್ಯಕ್ಕೊಳಗಾದ ಗರ್ಭಿಣಿ. ಹರಿಗೆಗಾಗಿ ರೇಣುಕಾ ಶನಿವಾರ ಮಧ್ಯಾಹ್ನವೇ ಸರ್ಕಾರಿ ಹೆರಿಗೆ ಅಸ್ಪತ್ರೆಗೆ ದಾಖಲಾಗಿದ್ದರು. ರೇಣುಕಾ ಒಂದೂವರೆ ದಿನ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದರೂ ಹೆರಿಗೆ ಮಾಡದೆ ವೈದ್ಯರು ನಿರ್ಲಕ್ಷ್ಯ ವಹಿಸಿದ್ದಾರೆ.ಕೊನೆಗೆ ಭಾನುವಾರ ಸಂಜೆ ಸಿಜೇರಿಯನ್ ಮಾಡಿ ಶಿಶುವನ್ನ ತೆಗೆದಿದ್ದಾರೆ. ಆದರೆ ಅಷ್ಟರಲ್ಲಿ ಹೊಟ್ಟೆಯಲ್ಲೇ ಮಗು ಮೃತಪಟ್ಟಿತ್ತು. ವೈದ್ಯರು ನಿರ್ಲಕ್ಷ್ಯ ವಹಿಸಿದ್ದರಿಂದ ಈ ರೀತಿಯಾಗಿದೆ ಎಂದು ರೇಣುಕಾ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ನಿರ್ಲಕ್ಷ್ಯ ತೋರಿದ ವೈದ್ಯರಿಗೆ ರೇಣುಕಾ ತಾಯಿ ಹಿಡಿಶಾಪ ಹಾಕಿದ್ದಾರೆ.ಹೆರಿಗೆ ಮಾಡದ ವೈದ್ಯರ ವಿರುದ್ಧ ಆಸ್ಪತ್ರೆ ಅಧೀಕ್ಷಕರಿಗೆ ದೂರು ನೀಡಿದ್ದು, ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುಲು ಆಗ್ರಹಿಸಿದ್ದಾರೆ. ಬಳಿಕ ಗಾಂಧಿನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಮಾಧಾನ ಮಾಡಿದ್ದಾರೆ. ಇತ್ತ ಮಗುವನ್ನು ಕಳೆದುಕೊಂಡ ತಾಯಿಯ ಅಕ್ರಂದನ ಮುಗಿಲು ಮುಟ್ಟಿದೆ.






 Advertisement 




Sign in to your account
Username or Email Address


Password

 Remember Me


