ಕೋಲಾರ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಕೋಲಾರದ ಗಡಿ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.ಈ ಅಪಘಾತ ತಡರಾತ್ರಿ ಜಿಲ್ಲೆಯ ಬಂಗಾರುಪಾಳ್ಯಂ ಬಳಿ ಸಂಭವಿಸಿದ್ದು, ಕಾರಿನಲ್ಲಿದ್ದ ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರನ್ನು ಕೇರಳ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ಕು ಮಂದಿಗೆ ತೀವ್ರವಾಗಿ ಗಾಯಗಳಾಗಿದ್ದು, ಕೂಡಲೇ ಅವರನ್ನು ಬಂಗಾರುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಕ್ಸೈಲೋ ಕಾರು ಕೇರಳದ ಕಾಸರಗೋಡು ನಿಂದ ತಿರುಪತಿ ತಿಮ್ಮಪ್ಪ ನ ದರ್ಶನಕ್ಕೆ ತೆರಳುತ್ತಿತ್ತು. ಈ ವೇಳೆ ಎಸ್.ಆರ್.ಎಸ್ ಖಾಸಗಿ ಬಸ್, ಕಂಟೈನರ್ ವಾಹನವನ್ನು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದಾರೆ.ಈ ಘಟನೆ ಸಂಬಂಧ ಬಂಗಾರುಪಾಳ್ಯಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Andhra Pradesh: Collision between a bus and a car in Chittoor, last night, claimed 4 lives. pic.twitter.com/sYNLNH4w0q— ANI (@ANI) March 11, 2018Sign in to your account
Username or Email Address


Password

 Remember Me


