ಬೆಂಗಳೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿ ಆಕಸ್ಮಿಕವಾಗಿ ಸಂಪ್‍ನಲ್ಲಿ ಬಿದ್ದು ಸಾವನ್ನಪಿರುವ ಘಟನೆ ನಗರದಲ್ಲಿ ನಡೆದಿದೆ.ನಗರದ ಹೆಗ್ಗನಹಳ್ಳಿಯ ಶ್ರೀಗಂಧ ಲೇಔಟ್‍ನಲ್ಲಿ ಈ ಘಟನೆ ನಡೆದಿದೆ. ವೆಂಕಟೇಶ ಎಂಬವರ ಪುತ್ರಿಯಾದ 6 ವರ್ಷದ ಹರಿಪ್ರಿಯ ಮೃತ ದುರ್ದೈವಿ. ಇಂದು ಬೆಳಿಗ್ಗೆ ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದಳು. ಈ ಸಂದರ್ಭದಲ್ಲಿ ಬಾಲಕಿ ತೆರೆದ ನೀರಿನ ಸಂಪ್‍ಗೆ ಆಕಸ್ಮಿಕವಾಗಿ ಬಿದ್ದಿದ್ದಾಳೆ. ಹರಿಪ್ರಿಯಾ ನೀರಿಗೆ ಬಿದ್ದಾಗ ಯಾರು ನೋಡದ ಪರಿಣಾಮ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾಳೆ.ಪೋಷಕರು ಮನೆ ಮುಂದೆ ಆಟವಾಡುತ್ತಿದ್ದ ಮಗಳು ತುಂಬಾ ಸಮಯವಾದರೂ ಕಾಣುತ್ತಿಲ್ಲ ಎಂದು ಹುಡುಕಾಟ ನಡೆಸಿದ್ದಾರೆ. ಆಗ ನೀರಿನ ಸಂಪ್‍ಗೆ ಬಿದ್ದು ಸಾವ್ನನಪ್ಪಿರುವುದು ಗೊತ್ತಾಗಿದೆ. ಈ ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Sign in to your account
Username or Email Address


Password

 Remember Me


