ಬೆಂಗಳೂರು: ಲೋಕಾಯುಕ್ತ ನ್ಯಾಯಾಮೂರ್ತಿಗಳಿಗೆ ಕಚೇರಿಯಲ್ಲೇ ಚಾಕುವಿನಿಂದ ಇರಿತ ನಡೆಸಿರುವುದು ರಾಜ್ಯ ಸರ್ಕಾರದ ವೈಫಲ್ಯ ಎಂದು ಮಾಜಿ ಮುಖ್ಯಮಂತ್ರಿ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಪಬ್ಲಿಕ್ ಟಿವಿ ಗೆ ಪ್ರತಿಕ್ರಿಯೆ ನೀಡಿದ ಮಾಜಿ ಉಪಮುಖ್ಯಮಂತ್ರಿ ಆರ್ ಆಶೋಕ್, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲರಾಗಿದ್ದಾರೆ. ಬೆಂಗಳೂರು ನಗರ ಜನರು ರೌಡಿಗಳ ಅಟ್ಟಹಾಸಕ್ಕೆ ನಡುಗಿ ಹೋಗಿದ್ದರೆ. ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ವ್ಯವಸ್ಥೆ ಹಲ್ಲು ಕಿತ್ತ ಹಾವಿನಂತೆ ಮಾಡಿದ್ದರು. ಆದರೆ ಇಂದು ಲೋಕಾಯುಕ್ತ ನ್ಯಾಯಾಮೂರ್ತಿಗೆ ಚಾಕು ಇರಿದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ : ಲೋಕಾಯುಕ್ತ ಕಚೇರಿಯಲ್ಲಿ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಗೆ ಚಾಕು ಇರಿತಕಳೆದ ಕೆಲ ದಿನಗಳ ಹಿಂದೆ ನಲಪಾಡ್ ರೌಡಿಗಳ ಪ್ರಕರಣದಲ್ಲಿ ಬೆಂಗಳೂರು ಜನರಿಗೆ ಭಯ ಉಂಟಾಗಿತ್ತು. ರಾಜ್ಯ ಸರ್ಕಾರ ರೌಡಿಗಳಿಗೆ ಬೆಂಬಲ ನೀಡುತ್ತಿದೆ. ರಾಜ್ಯದಲ್ಲಿ ತಕ್ಷಣ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ : ಇದು ವಿಪರ್ಯಾಸವೇ ಸರಿ: ಸಂತೋಷ್ ಹೆಗ್ಡೆhttps://www.youtube.com/watch?v=6ywkWvKh-vo Sign in to your account
Username or Email Address


Password

 Remember Me


